ಕರ್ನಾಟಕ ವಿದ್ಯುತ್ ಮಂಡಳಿ ಪ್ರತಿ ಸಾರಿ ವಿದ್ಯುತ್ ಬಿಲ್ ನೀಡುವಾಗಲೂ ಅದರಲ್ಲಿ ಅಧಿಕ ಪ್ರಮಾಣದ ಮೇಲೆ ದಂಡ ಎಂಬ ವಾಖ್ಯವೊಂದು ಕಾಣಿಸುತ್ತದೆ. ಈ ಬಗ್ಗೆ ಇಲಾಖೆಯಯನ್ನು ಕೇಳಿದರೆ ನಿಗದಿತ ಪ್ರಮಾಣಕ್ಕಿಂತ ಅಧಿಕ ವಿದ್ಯುತ್ ಬಳಸಿದರೆ ಈ ದಂಡವನ್ನು ಹಾಕಲಾಗುತ್ತದೆ ಎಂದು ಹೇಳುತ್ತಾರೆ. ಹೆಚ್ಚಿನ ವಿದ್ಯುತ್ ಬಳಸಿದಾಗ ಹೆಚ್ಚಿನ ದಂಡವನ್ನೂ ಹಾಕಿದ ಉದಾಹರಣೆಗಳಿವೆ.
ಆದರೆ ನನ್ನಲ್ಲಿ ಮೂಡುತ್ತಿರುವ ಪ್ರಶ್ನೆ ಇಷ್ಟೇ. ವಿದ್ಯುತ್ತನ್ನು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿಗೆ ಬಳಸಿದಾಗ ದಂಡ ಹಾಕುವ ವಿದ್ಯುತ್ ಇಲಾಖೆ ಅತ್ಯಲ್ಪ ಪ್ರಮಾಣದಲ್ಲಿ ವಿದ್ಯುತ್ ಬಳಸುವ ಕುಟುಂಬಗಳಿಗೆ ವಿನಾಯಿತಿ ಯಾಕೆ ನೀಡುವುದಿಲ್ಲ?
ಕೆಲವು ಕುಟುಂಬಗಳು ತಿಗಳಿಗೆ 10 ಯುನಿಟ್ಗಿಂತ ಕಡಿಮೆ ವಿದ್ಯುತ್ ಬಳಸುತ್ತವೆ. ಅವುಗಳ ವಿದ್ಯುತ್ ಬಿಲ್ ಮೊತ್ತ 50 ರೂಪಾಯಿಗಳನ್ನೂ ಮುಟ್ಟುವುದಿಲ್ಲ. ಇಂತಹ ಕುಟುಂಬಗಳ ವಿದ್ಯುತ್ ಬಿಲ್ಗೆ ವಿನಾಯಿತಿಯನ್ನು ಇಲಾಖೆ ನೀಡದೇ ಇರುವುದು ವಿಚಿತ್ರ ಎನಿಸುತ್ತದೆ.
ಇಲಾಖೆ ಈ ಬಗ್ಗೆ ತಕ್ಷಣ ಚಿಂತಿಸಿ ವಿದ್ಯುತ್ ಬಿಲ್ ವಿನಾಯಿತಿಯನ್ನು ನೀಡುತ್ತದೆ ಎಂಬುದು ನಮ್ಮ ಆಶಯ.
ವಿದ್ಯುತ್ ಬಳಸುವ ಕುಟುಂಬಗಳಿಗೆ ವಿನಾಯಿತಿ ಯಾಕೆ ನೀಡುವುದಿಲ್ಲ?
ReplyDelete=========================================
ಶ್ರೀ ವಿನಯರವರಲ್ಲಿ,
ಈ ರೀತಿ ಯೋಚಿಸುವುದೇ ಪ್ರಗತಿಯ ವಿರುದ್ದದ ಧೋರಣೆಯಾಗಿದೆ. ವಿನಾಯತಿ, ಮನ್ನ ಸವಲತ್ತು ಇವಲ್ಲ ದುರ್ಬಲರನ್ನು ಹಾಗೆ ಇಡುವ ಹುನ್ನಾರವೇ ಆಗಿದೆ. ದುರ್ಬಲರನ್ನು ಆರ್ಥಿಕವಾಗಿ ಸದ್ರಡಗೊಳಿಸುವ ಅರ್ಥ ವ್ಯವಸ್ತೆ ಬೇಕು. ನಿಮ್ಮ ಅಭಿಪ್ರಾಯ ವಿರೋದಿಸಿದ್ದಕ್ಕೆ ಕ್ಷಮೆ ಇರಲಿ. ಇತಿ ಪ್ರೀತಿ ವಿಶ್ವಾಸದಿಂದ, ಗಂಗಾಧರ್ ಹೆಗಡೆ.
ಗಂಗಾಧರ್ ಜೀ... ನಿಮ್ಮ ಅಭಿಪ್ರಾಯಕ್ಕೆ ಧನ್ಯವಾದ ....
ReplyDeleteಆದರೆ ಹೇಚ್ಚು ಹೆಚ್ಚು ಬಿಲ್ ಹಾಕಿದ ಮಾತ್ರಕ್ಕೆ ದೇಶ ಉದ್ದಾರ ಆಗ್ತದಾ?