ಕೃಷ್ಣರಾಜ ಸಾಗರ ಅಣೆಕಟ್ಟು
‘ಭಾರತದ, ಏಷ್ಯಾದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿರುವ ಇದು ‘ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಕನಸಿನ ಕೂಸು. ಕಾವೇರಿ ನದಿಗೆ ಶ್ರೀರಂಗಪಟ್ಟಣದಿಂದ ಕೇವಲ 12 ಕಿಲೋಮೀಟರ್ ದೂರದಲ್ಲಿ ನಿರ್ಮಿಸಲಾಗಿರುವ ಈ ಅಣೆಕಟ್ಟು 130 ಅಡಿ ಎತ್ತರವಾಗಿದೆ. ಕೆಆರ್ಎಸ್ ಎಂದೇ ಹೆಸರಾಗಿರುವ ಈ ಅಣೆಕಟ್ಟು ಮಂಡ್ಯ, ಮೈಸೂರು ಜಿಲ್ಲೆಗಳ ಸಾವಿರಾರು ಎಕರೆಗೆ ನೀರುಣ್ಣಿಸುತ್ತದೆ. ‘ಭಾರತ ಸ್ವತಂತ್ರವಾಗುವ ಮೊದಲೇ ನಿರ್ಮಾಣಗೊಂಡಿರುವ ಈ ಅಣೆಕಟ್ಟು ಹಿಂದಿನ ತಲೆಮಾರಿನ ತಂತ್ರಕ್ಞರ ಯಶಸ್ವಿ ತಂತ್ರಜ್ಞಾನಕ್ಕೆ ಸಾಕ್ಷಿ. ಈ ಅಣೆಕಟ್ಟಿನ ಕೆಳ‘ಾಗದಲ್ಲಿ ನಿರ್ಮಿಸಲಾಗಿರುವ ಬೃಂದಾವನ ಉದ್ಯಾನವನವೂ ಅಷ್ಟೇ ಪ್ರಸಿದ್ಧಿ ಹೊಂದಿದ್ದು ವಿಶ್ವ ವಿಖ್ಯಾತಿ ಗಳಿಸಿದೆ.
ಲಿಂಗನ ಮಕ್ಕಿ ಅಣೆಕಟ್ಟು.
ಶರಾವತಿ ನದಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಎಂಬಲ್ಲಿ ನಿರ್ಮಿಸಲಾಗಿರುವ ಈ ಅಣೆಕಟ್ಟು 1819 ಅಡಿ ಎತ್ತರವಾಗಿದೆ. 1964ರಲ್ಲಿ ಉದ್ಘಾಟನೆಯಾದ ಈ ಅಣೆಕಟ್ಟಿನಿಂದ ಸುಮಾರು 300 ಕಿಲೋಮೀಟರ್ಗಳಷ್ಟು ‘ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಕರ್ನಾಟಕಕ್ಕೆ ಅಗತ್ಯವಿರುವ ವಿದ್ಯುತ್ತಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಲಿಂಗನಮಕ್ಕಿಯಲ್ಲೇ ಉತ್ಪಾದನೆಯಾಗುತ್ತದೆ. ಈ ಅಣೇಕಟ್ಟಿನಲ್ಲಿ 4368 ಮುಲಿಯನ್ ಕ್ಯೂಬಿಕ್ ಮೀಟರ್ನಷ್ಟು ನೀರನ್ನು ಸಂಗ್ರಹಿಸಿ ಇಡಬಹುದಾಗಿದೆ.
ಸುಪಾ ಅಣೆಕಟ್ಟು
ಕಾಳಿ ನದಿಗೆ ನಿರ್ಮಿಸಲಾಗಿರುವ ಸುಪಾ ಅಣೆಕಟ್ಟು ಕರ್ನಾಟಕದ ಅತ್ಯಂತ ಎಲ್ಲರವಾದ ಅಣೆಕಟ್ಟು ಎಂಬ ಖ್ಯಾತಿ ಗಳಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸುಪಾದಲ್ಲಿ ನಿರ್ಮಿಸಲಾಗಿರುವ ಈ ಅಣೆಕಟ್ಟು ವಿದ್ಯುತ್ ಉತ್ಪಾದನೆಯ ಕಾರಣಕ್ಕಾಗಿಯೇ ನಿರ್ಮಾಣಗೊಂಡಿದೆ. 1101 ಮೀಟರ್ ಎತ್ತರ ಇರುವ ಸುಪಾ ಅಣೆಕಟ್ಟು 332 ಮೀಟರ್ ಉದ್ದವಾಗಿದೆ. ಅಣೆಕಟ್ಟನ್ನು 1985ರಂದು ಉದ್ಘಾಟಿಸಲಾಗಿದೆ. ಇದು ಕರ್ನಾಟಕದ ಎರಡನೇ ಅತಿದೊಡ್ಡ ಅಣೆಕಟ್ಟು ಎಂಬ ಖ್ಯಾತಿಯನ್ನೂ ಗಳಿಸಿಕೊಂಡಿದೆ. ಕಾಳಿನದಿಗೆ ಕಟ್ಟಲಾಗಿರುವ ಹಲವಾಸು ದೊಡ್ಡ ಅಣೆಕಟ್ಟುಗಳಲ್ಲಿ ಇದೂ ಒಂದು.
ತುಂಗಭದ್ರಾ ಅಣೆಕಟ್ಟು
2441ಮೀಟರ್ ಉದ್ದ ಹಾಗೂ 49.38 ಮೀಟರ್ ಎತ್ತರ ಹೊಂದಿರುವ ತುಂಗಭದ್ರಾ ಅಣೆಕಟ್ಟು ನೀರಾವರಿ ಉದ್ದೇಶದಿಂದ ನಿರ್ಮಾಣಗೊಂಡಿದೆ. ಇದು ಹೊಸಪೇಟೆಯಿಂದ ಕೇವಲ 5 ಕಿಲೋಮೀಟರ್ ದೂರದಲ್ಲಿದೆ. 33 ಬಹುದೊಡ್ಡ ಗೇಟುಗಳನ್ನು ಹೊಂದಿರುವ ತುಂಗ‘ದ್ರಾ ಅಣೆಕಟ್ಟು ಬಹುದೊಡ್ಡ ಗಾತ್ರವನ್ನು ಹೊಂದಿದೆ. ಈ ಅಣೆಕಟ್ಟಿನಿಂದ ಸಂಗ್ರಹಿಸಲಾದ ನೀರನ್ನು ಕಾಲುವೆಗಳ ಮೂಲಕ ಕರ್ನಾಟಕದ ಚಿಕ್ಕಮಂಗಳೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರಿ ಹಾಗೂ ಆಂದ್ರಪ್ರದೇಶದ ಕರ್ನೂಲು, ಮೆಹಬೂಬ್ ನಗರ ಮುಂತಾದ ಜಿಲ್ಲೆಗಳಿಗೆ ನಿರಾವರಿ ಉದ್ದೇಶಕ್ಕಾಗಿ ಬಳಸಲಾಗುತ್ತದೆ.
ಕೊಡಸಳ್ಳಿ ಅಣೆಕಟ್ಟು.
ಕಾಳಿನದಿಗೆ ಯಲ್ಲಾಪುರ ತಾಲೂಕಿನ ಕೊಡಸಳ್ಳಿ ಬಳಿ ನಿರ್ಮಿಸಲಾಗಿರುವ ಈ ಅಣೆಕಟ್ಟನ್ನು 1997ರಲ್ಲಿ ಉದ್ಘಾಟಿಸಲಾಯಿತು. ವಿದ್ಯುತ್ ಉತ್ಪಾದನೆಯ ಉದ್ದೇಶದಿಂದಲೇ ನಿರ್ಮಾಣಗೊಂಡ ಅಣೆಕಟ್ಟು ಇದಾಗಿದೆ. ಪಶ್ಚಿಮ ಘಟ್ಟಗಳ ನಡುವೆ ಇರುವ ಈ ಅಣೆಕಟ್ಟು ನಿರ್ಮಾದ ಸಮಯದಲ್ಲಿ ಕಾಡಿನ ನಾಶದ ವಿರುದ್ಧ ಹಲವು ಹೋರಾಟಗಳು ನಡೆದಿದ್ದವು.
ಆಲಮಟ್ಟಿ ಅಣೆಕಟ್ಟು
ಜುಲೈ2005ರಲ್ಲಿ ಉದ್ಘಾಟನೆಯಾದ ಆಲಮಟ್ಟಿ ಅಣೆಕಟ್ಟು 509 ಮಿಟರ್ ಎತ್ತರವಾಗಿದೆ. ಇದನ್ನು ಈಗ ಸುಪ್ರಿಂ ಕೋರ್ಟಿನ ಆದೇಶದ ಮೇರೆಗೆ 519 ಮೀಟರ್ಗೆ ಏರಿಸಲಾಗುತ್ತಿದೆ. ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ಈ ಅಣೆಕಟ್ಟು ನಿರಾವರಿ ಹಾಗೂ ವಿದ್ಯುತ್ ಉತ್ಪಾದನೆ ಈ ಎರಡೂ ಉದ್ದೇಶ ಹೊಂದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಿರಮಿಸಲಾಗಿರುವ ಈ ಅಣೆಕಟ್ಟು 1565.15 ಮೀಟರ್ ಉದ್ದವಾಗಿದೆ. 42.19 ಟಿಎಂಸಿ ನೀರನ್ನು ಹಿಡಿದಿಡುವ ಸಾಮರ್ಥ್ಯವನ್ನು ಈ ಅಣೆಕಟ್ಟು ಹೊಂದಿದೆ.
ಇವು ಕರ್ನಾಟಕದ ಪ್ರಮುಖ ಅನೆಕಟ್ಟುಗಳು. ಇವಲ್ಲದೆ ಕದ್ರಾ ಅಣೆಕಟ್ಟು, ನಾರಾಯಣಪುರ, ಕಬಿನಿ, ಹಾರಂಗಿ, ಗಾಜನೂರು, ಕದ್ರಾ, ಬಾಚಣಕಿ, ಗೋರೂರು, ಬಸವಸಾಗರ, ಹಿಡಕಲ್, ಕಣ್ವ, ಲಕ್ಕವಳ್ಳಿ, ಮಾರ್ಕೋನಹಳ್ಳಿ, ಸಾತನೂರು, ವಾಣಿವಿಲಾಸ ಸಾಗರ ಮುಂತಾದ ಹಲವು ಮಧ್ಯಮ ಗಾತ್ರದ ಅಣೆಕಟ್ಟುಗಳಿವೆ. ಅದಲ್ಲದೆ ನೂರಕ್ಕೂ ಹೆಚ್ಚಿನ ಚಿಕ್ಕಪುಟ್ಟ ಅಣೆಕಟ್ಟುಗಳಿವೆ. ಇವುಗಳ ಜೊತೆಗೆ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನೂರಾರು ಚಿಕ್ಕ ಪುಟ್ಟ ಅಣೆಕಟ್ಟುಗಳ ನಿರ್ಮಾಣಕ್ಕೆ ಸಮೀಕ್ಷೆ ನಡೆಸಲಾಗಿದೆ. ಇವುಗಳ ವಿರುದ್ಧ ಪರಿಸರವಾದಿಗಳು ಹೋರಾಟ ಪ್ರಾರಂಭಿಸಿದ್ದಾರೆ.
ಕನ್ನಡ ನಾಡಿಗೆ ವಿದ್ಯುತ್ತಿನ ಜೊತೆಗೆ ಬೆಳೆಗಳಿಗೆ ನೀರನ್ನೂ ನೀಡುತ್ತಿರುವ ಈ ಅಣೆಕಟ್ಟುಗಳು ಭವ್ಯ ಭಾರತದ ದೇಗುಲಗಳೇ ಹೌದು
No comments:
Post a Comment