ವಿಸ್ಮಯಗಳ ಗೂಡು : ಈ ಮಲೆನಾಡು
ಭಾಗ -2
ಮಲೆನಾಡ ಒಡಲಿನೊಳು
ಏನುಂಟು ಏನಿಲ್ಲ..?
ಕಣ್ಣ ನೋಟದ ತುಂಬ
ಹಸಿರು ಮಡಿಲು..
ನಿಜ.., ಮಲೆನಾಡೆಂದರೆ ಹಾಗೆ.. ಸುಳಿದು ಬರುವ ಹೂ ಕಂಪು. ತಳಿರು, ತರುಲತೆಗಳ ಸೋಂಪು. ಕೋಗಿಲೆ, ಹಕ್ಕಿ ಪಕ್ಷಿಗಳ ಇಂಪು. ಹಸಿರು ಒನಪು.. ಒಬ್ಬಂಟಿಯಾದಾಗಲೆಲ್ಲ ಕಾಡುವ ನೆನಪು..
ಕಂಡ ಕಂಡಕಡೆಯಲ್ಲೆಲ್ಲ ಧುಮ್ಮಿಕ್ಕಿ ಹರಿದು ಕೆಳಗೆ ಹೋಗುವ ಜಲಪಾತ, ನಲಿದು-ಕುಣಿದು-ಬಳಸಿ-ಬಳುಕಿ-ಬೆಳೆಸಿ ಹರಿಯುವ ನದಿಗಳು, ವರ್ಷದ ಆರು ತಿಂಗಳುಗಳ ಕಾಲ ಜಿಟಿ ಜಿಟಿಯೆನ್ನುವ ಮಳೆ, ಕಾಲಿಟ್ಟಲ್ಲಿ ಸದ್ದಿಲ್ಲದೇ ಅಂಟಿಕೊಂಡು ರಕ್ತಹೀರಿ ಡೊಣೆಯನಂತಾಗುವ ಉಂಬಳ, ಜಿಗಳೆಗಳು, ಮಳೆಗಾಲ ಬಂದ ತಕ್ಷಣ ಟ್ವಂಯ್ ಟ್ವಂಯ್ ಎಂದು ವದರಿ ಎಲ್ಲರನ್ನೂ ಸಜ್ಜುಗೊಳಿಸುವ ಮಳೆಜಿರಲೆಗಳು ಅಥವಾ ಸಿಕಾಡಗಳು.. ಇವುಗಳೆ ಮಲೆನಾಡಿನ ಯಜಮಾನರುಗಳು.. ಅಥವಾ ಮಲೆನಾಡನ್ನು ಸಾಕ್ಷೀಕರಿಸುವ ಪ್ರಾಣಿ, ಪಕ್ಷಿ ಕೀಟ ಪ್ರಬೇಧಗಳು..
ಪಟ್ಟೆಪಟ್ಟೆಯ ಕೊಳಕು ಮಂಡಲ, ಹಸಿರೆಲೆಯ ನಡುವೆ ಹಾಯಾಗಿ ಜೀವನ ನಡೆಸುವ ಹಸುರುಳ್ಳೆ ಹಾವು, ಕಣ್ಣಿಲ್ಲದಿದ್ದರೂ ಎರಡೂ ತಲೆಗಳನ್ನು ಒಳಗೊಂಡು ಅತ್ತ ಇತ್ತ ಎಂಬಂತೆ ಸುಳಿದಾಡುವ ಮಣ್ಣಮುಕ್ಕ ಹಾವು, ಮನುಷ್ಯನನ್ನೂ ಮೀರಿಸುವ ಕಾಳಿಂಗ, ಕೇರೆ ಹಾವು, ಸರ್ಪ, ಕುದುರುಬೆಳ್ಳ, ಹಾರಗಿಣಿ ಮುಂತಾದ ಹಾವುಗಳ ಸಮೂಹ, ವೂವೂಝಿಲಾ ವಾದ್ಯವನ್ನೂ ಮೀರಿಸುವ ವಂಡರು (ಡೊಂಗರು) ಕಪ್ಪೆಗಳು.., ಚಕ್ಕನೆ ನೀರನಿಂದ ಜಿಗಿದು ಕೈಗೆ ಮುತ್ತಿಕ್ಕಿ ಕೈಯಲ್ಲಿನ ತಿಂಡಿಯನ್ನು ಕಳ್ಳತನ ಮಾಡುವ ಬಳ್ಳಿ ಮಿಂಚಿನ ಮೀನುಗಳು, ಹೊಳೆಯ ದಡದಲ್ಲಿ ತಲೆಯೆತ್ತಿ ನಿಂತು ಸವಿ ಹಣ್ಣನ್ನು ನೀಡುವ ಹೂಡಲು.. ಇನ್ನೆಷ್ಟು ನಮೂನೆಗಳನ್ನು ಹೇಳಿದರೂ ಮಲೆನಾಡಿನ ದೃಶ್ಯ ವೈಭವವನ್ನು ಕಿಂಚಿತ್ತೂ ತಿಳಿಸಿದಂತೆ ಆಗುವುದಿಲ್ಲ...
ಮಲೆನಾಡಿನ ಒಡಲೊಳಗೆ ಹೆಜ್ಜೆ ಹಾಕಿದಂತೆಲ್ಲ ನಿಘೂಡಗಳು ಆವರಿಸುತ್ತವೆ.. ಕುತೂಹಲಕ್ಕೆ ಕೈಹಾಕಿದಂತೆಲ್ಲ ಹೊಸ ಹೊಸ ಬೆಡಗುಗಳು ಬೆರಗುಗಳು ತೆರೆದುಕೊಳ್ಳುತ್ತವೆ.. ಇವುಗಳೆಲ್ಲ ಮಲೆನಾಡಿನ ಚಿಕ್ಕದೊಂದು ತುಣುಕಷ್ಟೇ.. ಮಲೆನಾಡಿನ ಅಸಲೀತನದ ಪರಿಚಯ ನಮಗಾಗಬೇಕಾದರೆ ಅಲ್ಲಿಗೇ ಹೋಗಬೇಕು. 1801ರಲ್ಲಿ ಬ್ರಿಟಿಷರ ಜಾನ್ ಬುಕಾನನ್ ಎಂಬಾತ ಮಲೆನಾಡಿನ ಒಡಲೊಳಗೆ ಹೆಜ್ಜೆ ಹಾಕಿ ಇಲ್ಲಿನ ಬೆರಗನ್ನೆಲ್ಲ ದಾಖಲಿಸಿದ್ದಾನಂತೆ.. ಅವನಂತೆ ಇನ್ನೊಮ್ಮೆ ನಾವು ಹೆಜ್ಜೆ ಹಾಕಿದಾಗಲೇ ಅಲ್ಪಸ್ವಲ್ಪವಾದರೂ ಮಲೆನಾಡು ಅರ್ಥವಾಗಬಲ್ಲದೇನೋ.. ಮಲೆನಾಡೆಂಬ ಸಾಗರದೊಳಗೆ ಒಮ್ಮೆಯಾದರೂ ಬುಕಾನನ್ ನಂತೆ ದೋಣಿಯಾನ ಮಾಡೋಣ.. ಮಲೆನಾಡಿನ ಸೊಬಗನ್ನು ಆಸ್ವಾದಿಸೋಣ ಅಲ್ಲವೇ..
ಏನುಂಟು ಏನಿಲ್ಲ..?
ಕಣ್ಣ ನೋಟದ ತುಂಬ
ಹಸಿರು ಮಡಿಲು..
ನಿಜ.., ಮಲೆನಾಡೆಂದರೆ ಹಾಗೆ.. ಸುಳಿದು ಬರುವ ಹೂ ಕಂಪು. ತಳಿರು, ತರುಲತೆಗಳ ಸೋಂಪು. ಕೋಗಿಲೆ, ಹಕ್ಕಿ ಪಕ್ಷಿಗಳ ಇಂಪು. ಹಸಿರು ಒನಪು.. ಒಬ್ಬಂಟಿಯಾದಾಗಲೆಲ್ಲ ಕಾಡುವ ನೆನಪು..
ಮಲೆನಾಡೆಂದೂಡಲೆಲ್ಲ ನೆನಪಾಗುವಂತದ್ದು ಹಸಿರು ಅಡಿಕೆಯ ತೋಟ.., ಅಲ್ಲಲ್ಲಿ ಕಣ್ತಣಿಪ ಭತ್ತದ ಗದ್ದೆಗಳ ಸೊಬಗು, ಮಾವಿನ, ಅಪ್ಪೆಯ ಮರಗಳ ನರ್ತನ, ಒಂದಕ್ಕಿಂತ ಒಂದು ಎತ್ತರಕ್ಕೆ ಸ್ಪರ್ಧೆ ಮಾಡುವಂತಹ ಪರ್ವತ ಶೀಖರಗಳು.. ಅಲ್ಲಲ್ಲಿ ಕಾಫಿಯೂ ಇದೆ.. ಮತ್ತೆ ಹಲವೆಡೆ ಅರ್ಧಮರ್ಧ ಕಾನು..
ಇಲ್ಲಿಯ ವಿಶಿಷ್ಟತೆಗಳನ್ನು ಹೆಸರಿಸಿ ಪಟ್ಟಿಮಾಡುವುದು ಬಹಳ ಕಷ್ಟದ ಕೆಲಸವೇ ಸರಿ. ಅದೊಂದು ಬೃಹತ್, ಹೆಮ್ಮೆಯ ಕೆಲಸ. ಕನ್ಣಿಗೆ ಕಾಣದ ಜೀವಿ ಸಂಕುಲದಿಂದ ಕಣ್ಣಿನಲ್ಲಿ ಹಿಡಿಯದಂತಹ ಜೀವಿ ಜಗತ್ತಿನ ಆಶ್ರಯ ತಾಣವೂ ಈ ಮಲೆನಾಡು ಎಂದರೆ ತಪ್ಪಾಗಲಿಕ್ಕಿಲ್ಲ. ಕನ್ಣಿಗೆ ಕಾಣದಂತಹ ಜೀವ ಪ್ರಬೇಧವಾದ `ದಾಟುಬಳ್ಳಿ' ಹಾವು ಈ ಮಲೆನಾಡಿನ ವಿಶ್ಷತೆಗಳಲ್ಲೊಂದು. ಹಾರ್ನಬಿಲ್, ಉದ್ದ ಬಾಲದ ಮಂಗ, ಲಂಗೂರ್ ಗಳು, ಕಣ್ಣಲ್ಲಿಯೇ ಕಾಡುವ, ಕಾಟಕೊಡುವ ಕಾಡುಪಾಪ.. ಅಷ್ಟೇ ಏಕೆ ದಿನ ಬೆಳಗಾದರೆ ಮನೆಯಂಗಳಕ್ಕೆ ಬಂದು ಹಾಯ್ ಹೇಳಿ ಹೋಗುವ ಕಾಡೆಮ್ಮೆಗಳ ಹಿಂಡು, ಮಳೆಗಾಲದ ಮಧುರ ಭಾವದಿಂದ ಕುಣಿದು ಎಲ್ಲರ ಕರೆಯುವ ನವಿಲು.. ಇವಿಷ್ಟನ್ನು ಹೇಳಿದರೆ ಮಲೆನಾಡಿನ ದೇಷ್ಯವೈಭವದ ಸವಿಗೆ ಸ್ವಲ್ಪ ಕಾಣಿಕೆ ಕೊಟ್ಟಂತಾಗುತ್ತದೆಯಲ್ಲವೇ..?ಕಂಡ ಕಂಡಕಡೆಯಲ್ಲೆಲ್ಲ ಧುಮ್ಮಿಕ್ಕಿ ಹರಿದು ಕೆಳಗೆ ಹೋಗುವ ಜಲಪಾತ, ನಲಿದು-ಕುಣಿದು-ಬಳಸಿ-ಬಳುಕಿ-ಬೆಳೆಸಿ ಹರಿಯುವ ನದಿಗಳು, ವರ್ಷದ ಆರು ತಿಂಗಳುಗಳ ಕಾಲ ಜಿಟಿ ಜಿಟಿಯೆನ್ನುವ ಮಳೆ, ಕಾಲಿಟ್ಟಲ್ಲಿ ಸದ್ದಿಲ್ಲದೇ ಅಂಟಿಕೊಂಡು ರಕ್ತಹೀರಿ ಡೊಣೆಯನಂತಾಗುವ ಉಂಬಳ, ಜಿಗಳೆಗಳು, ಮಳೆಗಾಲ ಬಂದ ತಕ್ಷಣ ಟ್ವಂಯ್ ಟ್ವಂಯ್ ಎಂದು ವದರಿ ಎಲ್ಲರನ್ನೂ ಸಜ್ಜುಗೊಳಿಸುವ ಮಳೆಜಿರಲೆಗಳು ಅಥವಾ ಸಿಕಾಡಗಳು.. ಇವುಗಳೆ ಮಲೆನಾಡಿನ ಯಜಮಾನರುಗಳು.. ಅಥವಾ ಮಲೆನಾಡನ್ನು ಸಾಕ್ಷೀಕರಿಸುವ ಪ್ರಾಣಿ, ಪಕ್ಷಿ ಕೀಟ ಪ್ರಬೇಧಗಳು..
ಕೆಂಪು, ಅರಶಿಣ ಬಣ್ಣದಲ್ಲಿರುವ ಕಾದಾಳಿ ಮಣ್ಣು, ಮಳೆಗಾಲದಲ್ಲಿ ಬರಿ ಅರಲು, ಬೇಸಿಗೆಯಲ್ಲಿ ಹುಡಿ ಹುಡಿ ಧೂಳನ್ನು ರಾಚುವ ಈ ಮಣ್ಣು ಇನ್ಯಾವ ಕಡೆಯಲ್ಲೂ ಕಾಣಸಿಗುವುದಿಲ್ಲ.. ಕಚಕ್ಕನೆ ಕಾಲನ್ನು ಬಗೆಯುವ ಬಿಳಿಗಲ್ಲುಗಳು ಮಲೆನಾಡಿನ ಮತ್ತಷ್ಟು ವಿಶೇಷತೆಗಳು.
ಹಸಿರು ಚಾದರವನ್ನು ಹೊದ್ದು ಶತಮಾನದಿಂದ ಕಾಲುಚಾಚಿ ಮಲಗಿರುವ ದೈತ್ಯ ಗುಡ್ಡಗಳು, ಬಾನಿಗೆ ಸವಾಲು ಹಾಕಿ ಚುಂಬನಕ್ಕಾಘಿ ನಿಂತಿರುವ ದೈತ್ಯ ಮರಗಳು, ಮುಳ್ಳು ಮುಳುಗಳ ಬೆತ್ತ, ಹಕ್ಕಿಗಳ ಪಾಲಿನ ಸ್ವರ್ಗವಾಗಿ, ಮಣ್ಣನ್ನು ಕೊಚ್ಚಿಕೊಂಡು ಹೋಗದಂತೆ ತಡೆದು ನಿಂತು ರೈತ ಸ್ನೇಹಿಯಾಗಿರುವ ವಾಟೆಮಟ್ಟಿ, ಅಂಡಿನಲ್ಲಿ ವಿಷದ ಬಾಣವನ್ನೇ ಹೊತ್ತುಕೊಂಡು ಸೊಂಯ್ಯನೆ ಹಾರಾಡುವ ಭಂಡಾರಮಡಿಕೆ ಹುಳುಗಳೆಂಬ ಪ್ರಕೃತಿ ಸೈನಿಕರು, ಕಡಜೀರಿಗೆ ಹುಳುಗಳು, ಸವಿ ಸವಿಯ ತುಪ್ಪವನ್ನು ಕರುಣಿಸುವ ಮಿಸರಿ, ತುಡುವಿ, ಕೋಲ್ಜೇನುಗಳು., ಇವೆಲ್ಲ ಮಲೆನಾಡಿನ ಮೆರಗಿನ ಚೌಕಟ್ಟುಗಳೆನ್ನುವುದು ಸುಳ್ಳಲ್ಲ..ಪಟ್ಟೆಪಟ್ಟೆಯ ಕೊಳಕು ಮಂಡಲ, ಹಸಿರೆಲೆಯ ನಡುವೆ ಹಾಯಾಗಿ ಜೀವನ ನಡೆಸುವ ಹಸುರುಳ್ಳೆ ಹಾವು, ಕಣ್ಣಿಲ್ಲದಿದ್ದರೂ ಎರಡೂ ತಲೆಗಳನ್ನು ಒಳಗೊಂಡು ಅತ್ತ ಇತ್ತ ಎಂಬಂತೆ ಸುಳಿದಾಡುವ ಮಣ್ಣಮುಕ್ಕ ಹಾವು, ಮನುಷ್ಯನನ್ನೂ ಮೀರಿಸುವ ಕಾಳಿಂಗ, ಕೇರೆ ಹಾವು, ಸರ್ಪ, ಕುದುರುಬೆಳ್ಳ, ಹಾರಗಿಣಿ ಮುಂತಾದ ಹಾವುಗಳ ಸಮೂಹ, ವೂವೂಝಿಲಾ ವಾದ್ಯವನ್ನೂ ಮೀರಿಸುವ ವಂಡರು (ಡೊಂಗರು) ಕಪ್ಪೆಗಳು.., ಚಕ್ಕನೆ ನೀರನಿಂದ ಜಿಗಿದು ಕೈಗೆ ಮುತ್ತಿಕ್ಕಿ ಕೈಯಲ್ಲಿನ ತಿಂಡಿಯನ್ನು ಕಳ್ಳತನ ಮಾಡುವ ಬಳ್ಳಿ ಮಿಂಚಿನ ಮೀನುಗಳು, ಹೊಳೆಯ ದಡದಲ್ಲಿ ತಲೆಯೆತ್ತಿ ನಿಂತು ಸವಿ ಹಣ್ಣನ್ನು ನೀಡುವ ಹೂಡಲು.. ಇನ್ನೆಷ್ಟು ನಮೂನೆಗಳನ್ನು ಹೇಳಿದರೂ ಮಲೆನಾಡಿನ ದೃಶ್ಯ ವೈಭವವನ್ನು ಕಿಂಚಿತ್ತೂ ತಿಳಿಸಿದಂತೆ ಆಗುವುದಿಲ್ಲ...
ಮಲೆನಾಡಿನ ಒಡಲೊಳಗೆ ಹೆಜ್ಜೆ ಹಾಕಿದಂತೆಲ್ಲ ನಿಘೂಡಗಳು ಆವರಿಸುತ್ತವೆ.. ಕುತೂಹಲಕ್ಕೆ ಕೈಹಾಕಿದಂತೆಲ್ಲ ಹೊಸ ಹೊಸ ಬೆಡಗುಗಳು ಬೆರಗುಗಳು ತೆರೆದುಕೊಳ್ಳುತ್ತವೆ.. ಇವುಗಳೆಲ್ಲ ಮಲೆನಾಡಿನ ಚಿಕ್ಕದೊಂದು ತುಣುಕಷ್ಟೇ.. ಮಲೆನಾಡಿನ ಅಸಲೀತನದ ಪರಿಚಯ ನಮಗಾಗಬೇಕಾದರೆ ಅಲ್ಲಿಗೇ ಹೋಗಬೇಕು. 1801ರಲ್ಲಿ ಬ್ರಿಟಿಷರ ಜಾನ್ ಬುಕಾನನ್ ಎಂಬಾತ ಮಲೆನಾಡಿನ ಒಡಲೊಳಗೆ ಹೆಜ್ಜೆ ಹಾಕಿ ಇಲ್ಲಿನ ಬೆರಗನ್ನೆಲ್ಲ ದಾಖಲಿಸಿದ್ದಾನಂತೆ.. ಅವನಂತೆ ಇನ್ನೊಮ್ಮೆ ನಾವು ಹೆಜ್ಜೆ ಹಾಕಿದಾಗಲೇ ಅಲ್ಪಸ್ವಲ್ಪವಾದರೂ ಮಲೆನಾಡು ಅರ್ಥವಾಗಬಲ್ಲದೇನೋ.. ಮಲೆನಾಡೆಂಬ ಸಾಗರದೊಳಗೆ ಒಮ್ಮೆಯಾದರೂ ಬುಕಾನನ್ ನಂತೆ ದೋಣಿಯಾನ ಮಾಡೋಣ.. ಮಲೆನಾಡಿನ ಸೊಬಗನ್ನು ಆಸ್ವಾದಿಸೋಣ ಅಲ್ಲವೇ..