ಮಾದಕ ವಸ್ತುಗಳ ಬಳಕೆ : ಅರಣ್ಯ ಇಲಾಖೆ ಅಧಿಕಾರಿಗಳ ಶಾಮೀಲಿನ ಶಂಕೆ
.....................
ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದು ಎನ್ನಿಸಿಕೊಂಡಿರುವ ಸಿದ್ದಾಪುರ ತಾಲೂಕಿನ ಭೀಮನವಾರೆಗುಡ್ಡ ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತಿದೆ. ಮಾದಕ ವ್ಯಸನಿಗಳು, ಮದ್ಯವ್ಯಸನಿಗಳು ಭೀಮನವಾರೆ ಗುಡ್ದದಲ್ಲಿ ದಿನಂಪ್ರತಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಈ ಕುರಿತು ಕಠಿಣ ಕ್ರಮ ಕೈಗೊಲ್ಳಬೇಕಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.
ಭೀಮನವಾರೆ ಗುಡ್ಡ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದು. ಆಂಗುಬೆಯ ಸೂಯಾಸ್ತವನ್ನು ನೆನಪಿಗೆ ತರುವಂತಹ ಪ್ರಸಿದ್ಧ ತಾಣ ಇದಾಗಿದ್ದು ಸಿದ್ದಾಪುರದಿಂದ 35 ಕಿಲೋಮೀಟರ್ ಹಾಗೂ ಶಿರಸಿಯಿಂದ 30 ಕಿಲೋಮೀಟರ್ ದೂರದಲ್ಲಿದೆ. ಈ ಪ್ರವಾಸಿ ತಾಣದ ವೀಕ್ಷಣೆಗೆ ದಿನಂಪ್ರತಿ ಹಲವಾರು ಜನರು ದೂರದ ಊರುಗಳಿಂದ ಆಗಮಿಸುತ್ತಾರೆ. ವಾರಾಂತ್ಯದಲ್ಲಿ ನೂರಾರು ಜನರು ಭೀಮನವಾರೆ ಗುಡ್ಡದಲ್ಲಿ ಪ್ರಕೃತಿ ವೀಕ್ಷಣೆ ಮಾಡಿ ಮನದಣಿಯುತ್ತಿದ್ದಾರೆ.
ಭೀಮನವಾರೆಗುಡ್ಡದಲ್ಲಿ ಅಕ್ರಮ ಚಟುವಟಿಕೆಗಳು ವ್ಯಾಪಕವಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಭೀಮನವಾರೆ ಗುಡ್ಡಕ್ಕೆ ಆಗಮಿಸುವ ಪ್ರವಾಸಿಗರು ದಿನಂಪ್ರತಿ ಮದ್ಯಪಾನದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಅಲ್ಲದೇ ವಾರದ ಕೆಲವು ದಿನಗಳಲ್ಲಿ ಈ ತಾಣ ವೀಕ್ಷಣೆಗೆ ಆಗಮಿಸುವ ಸುತ್ತಮುತ್ತಲ ಪ್ರದೇಶದ (ಅಲ್ಪಸಂಖ್ಯಾತ ಕೋಮಿನ) ಯುವಕರು ಮಾದಕ ವಸ್ತುಗಳ ಸೇವನೆಯಲ್ಲಿ ತೊಡಗಿಕೊಂಡಿದ್ದಾರೆ. ಭೀಮನವಾರೆ ಗುಡ್ಡದ ಪ್ರದೇಶದಲ್ಲಿ ಗಾಂಜಾ ಸೇವನೆ, ಮದ್ಯಪಾನ ಮಾಡುವುದು ಸೇರಿದಂತೆ ಹಲವು ರೀತಿಯ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಇದಲ್ಲದೇ ಭೀಮನವಾರೆ ಗುಡ್ಡಕ್ಕೆ ಬರುವ ಪ್ರೇಮಿಗಳೂ ಕುಡ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನುವುದು ಸ್ಥಳೀಯರ ಅಂಬೋಣವಾಗಿದೆ.
ಭೀಮನವಾರೆ ಗುಡ್ಡದಲ್ಲಿ ಅಕ್ರಮ ಚಟುವಟಿಕೆ, ಮದ್ಯಪಾನ, ಮಾದಕ ವಸ್ತುಗಳ ಸೇವನೆಗೆ ಸಾಕ್ಷಿಯಾಗಿ ಮದ್ಯದ ಬಾಟಲಿಗಳು ಎಲ್ಲೆಂದರಲ್ಲಿ ಬಿದ್ದುಕೊಂಡಿರುತ್ತವೆ. ಈ ಭಾಗದ ಯುವಕರು ನಿಗದಿತ ಸಮಯಕ್ಕೆ ಭೀಮನವಾರೆ ಗುಡ್ಡವನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳುತ್ತಾರಾದರೂ ಕೆಲ ದಿನಗಳಲ್ಲಿಯೇ ಮದ್ಯದ ಬಾಟಲಿಗಳು ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಪ್ರವಾಸಿಗರು ಎಲ್ಲೆಂದರಲ್ಲಿ ಎಸೆಯುತ್ತಾರೆ ಎಂಬುದು ಸ್ಥಳೀಯರ ಅಂಬೋಣ. ಭೀಮನವಾರೆ ಗುಡ್ಡದಲ್ಲಿಯೇ ಇರುವ ಒಂದೆರಡು ಸ್ಥಳಗಳಲ್ಲಿ ಇತ್ತೀಚಿನ ದಿನಗಳಲ್ಲಿ ಇಸ್ಪೀಟ್ ಕೂಡ ಆಡಲಾಗುತ್ತಿದೆ. ಇದರಿಂದಾಗಿ ಪ್ರವಾಸಿ ತಾಣದ ಪ್ರದೇಶ ಸಂಪೂರ್ಣವಾಗಿ ಹಾಳಾಗುತ್ತಿದೆ.
ಭೀಮನವಾರೆ ಗುಡ್ಡಕ್ಕೆ ತೆರಳುವ ಮಾರ್ಗದ ನಡುವೆ ಅರಣ್ಯ ಇಲಾಖೆಯ ಚೆಕ್ಪೋಸ್ಟ್ ಒಂದು ಇದೆ. ಆದರೆ ಇಲ್ಲಿ ಸಮರ್ಪಕವಾಗಿ ತನಿಖೆ ನಡೆಸಲಾಗುವುದಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಭೀಮನವಾರೆ ಗುಡ್ಡದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳು ಕಂಡೂ ಕಾಣದಂತಿದ್ದಾರೆ. ದಿನಂಪ್ರತಿ ಅನೈತಿಕ ಚಟುವಟಿಕೆಗಳು ನಡೆದರೂ ಅರಣ್ಯ ಇಲಾಖೆ ಅಧಿಕಾರಿಗಳು ತಮಗೂ, ಅದಕ್ಕೂ ಸಂಬಂಧವೇ ಇಲ್ಲ ಎಂಬಂತೆ ವತರ್ಿಸುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅರಣ್ಯ ಇಲಾಖೆಯ ಅಧಿಕಾರಿಗಳ ನಡೆ ಅರಣ್ಯ ಇಲಾಖೆಯ ಅಧಿಕಾರಿಗಳು ಇಲ್ಲಿ ಶಾಮೀಲಾಗಿದ್ದಾರೆಯೇ ಎಂಬ ಅನುಮಾನಕ್ಕೂ ಕೂಡ ಕಾರಣವಾಗಿದೆ. ನೂರಾರು ಪ್ರವಾಸಿಗರು ಆಗಮಿಸಿ ಅತ್ಯುತ್ತಮ ಪ್ರವಾಸಿ ತಾಣವಾಗಬಹುದಾಗಿದ್ದ, ತನ್ಮೂಲಕ ಸ್ಥಳೀಯರಿಗೆ ಆದಾಯದ ಮೂಲವಾಗಿ ಮಾಪರ್ಾಡಾಗಬಹುದಾಗಿದ್ದ ಬೀಮನವಾರೆಗುಡ್ಡ ಅಕ್ರಮ ಚಟುವಟಿಕೆಗಳಿಂದಾಗಿ ಕುಖ್ಯಾತಿಗೆ ಕಾರಣವಾಗುತ್ತಿದೆ.
ಮುಂದಿನ ದಿನಗಳಲ್ಲಿ ಭೀಮನವಾರೆಗುಡ್ಡದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಮಾದಕವಸ್ತು ಸೇವನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರವಾಸಿ ತಾಣಕ್ಕೆ ಆಗಮಿಸುವವರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಮಾದಕ ವಸ್ತು ಸೇವನೆ ಮಾಡುವವರ ವಿರುದ್ಧ ಹಾಗೂ ಅನೈತಿಕ ಚಟುವಟಿಕೆಗಳನ್ನು ಕೈಗೊಳ್ಳುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.
///////////////////
ಬೀಮನವಾರೆ ಗುಡ್ಡದ ವಾತಾವರಣ ಹದಗೆಟ್ಟಿದೆ. ಮದ್ಯವ್ಯಸನಿಗಳು ಹಾಗೂ ಮಾದಕ ವಸ್ತು ಸೇವನೆ ಮಾಡುವವರ ತಾಣವಾಗಿ ಬದಲಾಗಿದೆ. ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ. ಸಂಬಂಧಪಟ್ಟ ಇಲಾಖೆಗಳು ಈ ಕುರಿತು ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ.
ರಾಜೇಶ ನಾಯ್ಕ
ಪ್ರವಾಸಿ
(ವಿಶ್ವವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದೆ)